ನ್ಯೂಜಿಲೆಂಡ್ ವಿರುದ್ಧದ ಯಾವಾಗ, ಎಲ್ಲಿ ಮ್ಯಾಚ್?: ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯೂಜಿಲೆಂಡ್ ವಿರುದ್ಧ ಜನವರಿ 18 ರಿಂದ ಶುರುವಾಗಲಿರುವ ಸರಣಿಗೆ ಭಾರತ ಟೀಮ್ ರೆಡಿಯಾಗಿದ್ದು, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.

ಏಕದಿನ ಸರಣಿಗಳಲ್ಲಿ ಕಾಣಿಸಿಕೊಳ್ಳಲಿರುವ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಸರಣಿಗೆ ಆಯ್ಕೆಯಾಗಿಲ್ಲ .
ಇನ್ನು ಅಕ್ಷರ್ ಪಟೇಲ್ ಹಾಗೂ ಕೆಎಲ್ ರಾಹುಲ್ ವೈಯುಕ್ತಿಕ ಕಾರಣಗಳಿಗಾಗಿ ತಂಡದಿಂದ ಹೊರಗುಳಿದಿದ್ದಾರೆ.

ಹಿಟ್​ಮ್ಯಾನ್ ಅನುಪಸ್ಥಿತಿಯ ನಡುವೆ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.

ಮತ್ತೊಂದೆಡೆ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತಂಡ ಸಾರಥ್ಯವಹಿಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲಿದ್ದಾರೆ.

ಭಾರತ-ನ್ಯೂಜಿಲೆಂಡ್ ನಡುವಣ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

1ನೇ ಏಕದಿನ ಪಂದ್ಯ (ಹೈದರಾಬಾದ್) – ಜನವರಿ 18
2ನೇ ಏಕದಿನ ಪಂದ್ಯ (ರಾಯಪುರ) – ಜನವರಿ 21
3ನೇ ಏಕದಿನ ಪಂದ್ಯ (ಇಂಧೋರ್) – ಜನವರಿ 24

ಟಿ20 ಸರಣಿ ವೇಳಾಪಟ್ಟಿ:

1ನೇ ಟಿ20 ಪಂದ್ಯ (ರಾಂಚಿ) – ಜನವರಿ 27
2ನೇ ಟಿ20 ಪಂದ್ಯ (ಲಕ್ನೋ) – ಜನವರಿ 29
3ನೇ ಟಿ20 ಪಂದ್ಯ (ಅಹಮದಾಬಾದ್) – ಫೆಬ್ರವರಿ 1

ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ಟಿ20 ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!