Monday, January 12, 2026

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ಯಾವಾಗ? ದಿನಾಂಕ ಫಿಕ್ಸ್‌ ಆಯ್ತು ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ.

ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು. ಕಡೆಯ ಹಂತದ ಮೀಸಲಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು ಮೀಸಲಾತಿ ಪ್ರಕ್ರಿಯೆ ಫೆಬ್ರವರಿ 28 ವರೆಗೂ ನಡೆಯಲಿದೆ. ಮೀಸಲಾತಿ ಪ್ರಕ್ರಿಯೆ ಬಳಿಕ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಸರ್ಕಾರದ ವಕೀಲ ಅಭಿಷೇಕ್‌ ಮನುಸಿಂಘ್ವಿ ತಿಳಿಸಿದರು.

ಚುನಾವಣಾ ಆಯೋಗದ ಪರ ವಕೀಲರು, ಮಾರ್ಚ್ 16ರ ವೇಳೆಗೆ ಮತದಾರರ ಪರಿಶೀಲನೆ ಅಂತ್ಯವಾಗಲಿದೆ. ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ ಕೊನೆ ವಾರದವರೆಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯ ಬೇಕು ಎಂದು ಕೋರ್ಟ್‌ ಪ್ರಶ್ನಿಸಿತು. ಇದಕ್ಕೆ ಜೂನ್‌ವರೆಗೂ ಸಮಯ ಬೇಕಾಗಬಹುದು ಎಂದ ಆಯೋಗ ತಿಳಿಸಿತು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!