ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಅಂಕೋಲಾ:
ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು ಬಾಲಕನೋರ್ವ ಮೃತ ಪಟ್ಟ ಘಟನೆ ಇಲ್ಲಿನ ಮೊಗಟಾ ಕೆಂಕಣಿಯಲ್ಲಿ ಸಂಭವಿಸಿದೆ.
ಭರತ್ ಪ್ರಶಾಂತ ನಾಯಕ (13) ಮೃತ ಬಾಲಕನಾಗಿದ್ದು ಈತ ತನ್ನ ಮನೆಯಿಂದ ಪಕ್ಕದ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಗ್ರಾಮಸ್ಥರು ಸ್ಥಳದಲ್ಲಿ ಜಮಾವಣೆಗೊಂಡಿದ್ದು ಸಂಜೆ ಸಮಯದಲ್ಲಿ ಮೃತ ದೇಹ ಪತ್ತೆಯಾಗಿದೆ.
ಮೃತ ಬಾಲಕನ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು ಅಂಕೋಲಾ ಪಿ.ಎಸ್. ಐ ಪ್ರವಿಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.