Sunday, December 21, 2025

ದರ್ಶನ್ ಇಲ್ದೇ ಇರುವಾಗ ಕೆಲವೊಬ್ಬರು ಏನೇನೋ ಮಾತಾಡ್ತಾರೆ: ಸುದೀಪ್‌ಗೆ ಪರೋಕ್ಷವಾಗಿ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮ ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಬಾರಿ ದರ್ಶನ್ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ.

ಇದೀಗ ದಾವಣಗೆರೆಯಲ್ಲೂ ಪ್ರಚಾರ ಮಾಡಿದ್ದು, ಈ ವೇಳೆ ಅಭಿಮಾನಿಗಳಿಗೆ ದಿ ಡೆವಿಲ್ ಸಿನಿಮಾ ಯಶಸ್ಸು ಮಾಡುವಂತೆ ಮನವಿ ಮಾಡಿದ್ದಾರೆ.

ಇದೇ ಸಮಯ, ದರ್ಶನ್ ಅವ್ರು ಇಲ್ದೇ ಇರುವಾಗ ಕೆಲವೊಬ್ಬರು ಏನೇನೋ ಮಾತಾಡ್ತಾ ಇದ್ದಾರೆ. ವೇದಿಕೆ ಮೇಲೆ, ಚಾನೆಲ್‌ಗಳಲ್ಲಿ ಕುತ್ಕೊಂಡು ಮಾತಾಡ್ತಾರೆ ಎನ್ನುವ ಮೂಲಕ ಕಿಚ್ಚ ಸುದೀಪ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಸೈಲೆಂಟ್ ಆಗಿರೋದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ವಾ, ಆದರೆ ನನ್ನ ಗೆಳೆಯರು ಚೆನ್ನಾಗಿರಬೇಕು ಅಂತ ಬಾಯಿ ಮುಚ್ಚಿಕೊಂಡು ಇದ್ವಿ. ಬಾಯಿ ಇಲ್ಲಾ ಅಂತ ಅಲ್ಲಾ ಎಂದು ಕಿಚ್ಚ ಸುದೀಪ್ ಹೇಳಿದ್ದರು.

ಇದೀಗ ವಿಜಯಲಕ್ಷ್ಮಿ ದರ್ಶನ್ ಬಗ್ಗೆ, ಅವರ ಫ್ಯಾನ್ಸ್ ಬಗ್ಗೆ‌ ಏನೇನೋ ಮಾತಾಡ್ತಾ ಇರ್ತಾರೆ. ದರ್ಶನ್ ಅವ್ರು ಬಂದಾಗ ಬೆಂಗಳೂರಿನಲ್ಲಿ ಇರ್ತಾರೋ ಇಲ್ವೋ ಅನ್ನೋದೆ ಗೊತ್ತಾಗೋದಿಲ್ಲ. ಅಂತ ಜನಗಳು ದರ್ಶನ್ ಅವ್ರು ಇರುವಾಗ ಎಲ್ಲಿ ಮಾಯ ಅಗಿರ್ತಾರೋ ಗೊತ್ತಾಗೋದಿಲ್ಲ ಎಂದು ಹೇಳಿದ್ದಾರೆ. ದರ್ಶನ್ ಹೇಳಿದಂತೆ ಯಾರು ಕೂಡ ಕೋಪ ಮಾಡ್ಕೋಬೇಡಿ, ಬೇಜಾರ್ ಮಾಡ್ಕೋಬೇಡಿ ಎಂದು ವಿಜಯಲಕ್ಷ್ಮಿ ಹೇಳಿದರು.

error: Content is protected !!