ವಯನಾಡ್​​ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಯಾವಾಗ?ಆಯೋಗ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿ (Rahul Gandhi) ಸಂಸದ ಸ್ಥಾನ ಅನರ್ಹಗೊಂಡು ಹಿನ್ನೆಲೆ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಪ್ರಶ್ನೆಗೆ ಭಾರತೀಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿದ್ದಾರೆ.

ಚುನಾವಣೆ ಘೋಷಿಸಲು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಯಾವುದೇ ಆತುರವಿಲ್ಲ ಎಂದು ರಾಜೀವ್ ಕುಮಾರ್ ಬುಧವಾರ ಹೇಳಿದ್ದಾರೆ.

2019 ರ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ರಾಹುಲ್ ಅವರನ್ನು ಲೋಕಸಭೆಯಿಂದ ಅನರ್ಹ ಮಾಡಲಾಗಿತ್ತು. ಆದಾಗ್ಯೂ ಈ ತೀರ್ಪು ವಿರುದ್ದ ಮೇಲ್ಮನವಿ ಸಲ್ಲಿಸಲು ರಾಹುಲ್​ಗೆ 30 ದಿನಗಳ ಸಮಯವಿದೆ.

ಇತ್ತ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದಾಗ ಚುನಾವಣಾ ಆಯೋಗವು ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಬಹುದು ಎಂಬ ವದಂತಿ ಹಬ್ಬಿತ್ತು. ಆದಾಗ್ಯೂ, ಮೇಲ್ಮನವಿ ಸಲ್ಲಿಸಿ ಶಿಕ್ಷೆಯನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ 30 ದಿನಗಳ ಗಡುವು ನೀಡಿರುವುದರಿಂದ ಚುನಾವಣಾ ಆಯೋಗವು ಕಾಯಲಿದೆ ಎಂದು ಕುಮಾರ್ ಹೇಳಿದ್ದಾರೆ.

ಚುನಾವಣಾ ಆಯೋಗ ರಾಜಕೀಯದಲ್ಲಿಲ್ಲ. ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ, ಆಯೋಗವು ವಯನಾಡ್ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ. ಏತನ್ಮಧ್ಯೆ, ರಾಹುಲ್ ಗಾಂಧಿ ಅವರಿಗೆ ನ್ಯಾಯಾಂಗ ಪರಿಹಾರವನ್ನು ಕೇಳಲು ವಿಚಾರಣಾ ನ್ಯಾಯಾಲಯವು ಮೂವತ್ತು ದಿನಗಳ ಕಾಲಾವಕಾಶವನ್ನು ನೀಡಿದೆ. ಆದ್ದರಿಂದ ನಾವು ಕಾಯುತ್ತೇವೆ. ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!