ಪೂರ್ಣ ಪ್ರಮಾಣದ ಸಂಪುಟ ರಚನೆ ಯಾವಾಗ? ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ನೂತನ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 26ರಂದು ಹಳೆ ಸರ್ಕಾರದ ಅವಧಿ ಮುಗಿಯಲಿದೆ.ಅಷ್ಟರೊಳಗೆ ನೂತನ ಸಚಿವ ಸಂಪುಟ ರಚನೆ ಆಗಲಿದೆ ಎಂದರು.

ಎರಡ್ಮೂರು ದಿನಗಳಲ್ಲಿ ನೂತನ ಸಚಿವರ ಪ್ರಮಾಣಚನ ಸ್ವೀಕಾರವಾಗಲಿದೆ. ಮೇ 24ರೊಳಗೆ ಹೊಸ ಸದಸ್ಯರು ಸಂಪುಟ ಸೇರಲಿದ್ದಾರೆ. ಖಾತೆ ಹಂಚಿಕೆ ಸಿಎಂ ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಎಲ್ಲವನ್ನೂ ಅವರೇ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!