ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಈ ಸರ್ಕಾರಕ್ಕೆ ಕಪ್ಪು ಚುಕ್ಕೆ ಇದಂತೆ ಎಂದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಭಾರತೀಯ ಜನತಾ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಂದು ಮುಡಾ ಹಗರಣ ಮತ್ತು ಇನ್ನೊಂದು ವಾಲ್ಮೀಕಿ ಹಗರಣ. ಕಳೆದ ವರ್ಷದಿಂದ ಒಂದೇ ಒಂದು ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಕಾಂಗ್ರೆಸ್ ಸರಕಾರ ಬಂದ ನಂತರ ಲೂಟಿ ಮಾಡೋದೇ ಕೆಲಸವಾಗಿದೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ, ಸರಕಾರ ಪ್ರತಿಭಟನೆ ಹತ್ತಿಕ್ಕಲು ಯತ್ನಿಸುತ್ತಿದೆ. ಬಿಜೆಪಿ ನಾಯಕರನ್ನು ಅವರ ಮನೆ ಬಳಿಯೇ ಬಂಧಿಸಲು ಯತ್ನಿಸುತ್ತಿದ್ದಾರೆ. ಅದು ತಪ್ಪು. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸ ಮಾಡುತ್ತಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.