ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದು ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ (G Parameshwara) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾತನಾಡಿದ ಅವರು, ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಇದ್ರಲ್ಲಿ ಹಿಂದು ಧರ್ಮವನ್ನು (Hindu Religion) ಯಾರು ಹುಟ್ಟಿಸಿದರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿದ್ದು, ಈ ವಿಚಾರದಲ್ಲಿ ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದಾರೆ.
ಬೌದ್ಧಹಾಗೂ ಜೈನ ಧರ್ಮ ನಮ್ಮ ದೇಶದಲ್ಲಿ ಹುಟ್ಟಿತು. ಅದೇ ರೀತಿ ಹೊರಗಿನಿಂದ ಇಸ್ಲಾಂ ಹಾಗೂ ಕ್ರೈಸ್ತ ಧರ್ಮ ಬಂದಿವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ದೇಶದಾದ್ಯಂತ ತೀವ್ರ ಚರ್ಚೆಗೆ ಹಾಗೂ ವಿವಾದಕ್ಕೆ ಗ್ರಾಸವಾಗಿರುವ ಬೆನ್ನಲ್ಲೇ ಪರಮೇಶ್ವರ್ ಅವರು ಈ ಹೇಳಿಕೆ ನೀಡಿದ್ದಾರೆ.