ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 16 ರಂದು ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಈಗಾಗಲೇ 70 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಹಣ ವಸೂಲಿ ಮಾಡಿದರೆ ಸರ್ಕಾರದ ಗಮನಕ್ಕೆ ತನ್ನಿ ಎಂದರು.