ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಗೆ ಗುರುವಾರ ಹೃದಯ ಶಸ್ತ್ರ ಚಿಕಿತ್ಸೆ ನಡೆದಿದೆ. ಮೂರುವರೆ ಗಂಟೆ ಕಾಲ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ರಾಜ್ಯದ ಜನರ ಆಶೀರ್ವಾದರಿಂದ ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ. ಭಾನುವಾರ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಬಂದ ನಂತರ ಡಾ.ಮಂಜುನಾಥ ನಾಮಪತ್ರ ಸಲ್ಲಿಕೆ ದಿನಾಂಕದ ಬಗ್ಗೆ ನಿಗದಿ ಆಗಲಿದೆ. ಮುಂದಿನ ತಿಂಗಳು ಅಂದರೆ ಏಪ್ರಿಲ್ 1ರೊಳಗೆ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಕುಮಾರಸ್ವಾಮಿ ಅವರು ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.
ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಇತ್ತೀಚೆಗೆ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು.