ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋಗಳಲ್ಲಿ ನಂದಿನಿ ಮಳಿಗೆ ಓಪನ್ಗೆ ದಿನಾಂಕ ನಿಗದಿ ಆಗಿದೆ. ಪ್ರಾರಂಭಿಕವಾಗಿ ಮೂರು ಮೆಟ್ರೋ ಸ್ಟೇಷನ್ಗಳಲ್ಲಿ ನಂದಿನಿ ಮಳಿಗೆಗಳು ನಿರ್ಮಾಣ ಆಗಿದೆ.
ಈ ತಿಂಗಳ ಅಂತ್ಯದಲ್ಲಿ ನಮ್ಮ ಮೆಟ್ರೋಗಳಲ್ಲಿ ನಂದಿನಿ ಮಳಿಗೆಗಳು ಓಪನ್ ಆಗಲಿವೆ. ಕೆಎಂಎಫ್, ಬಿಎಂಆರ್ಸಿಎಲ್ ಮಳಿಗೆಗಳ ಓಪನ್ಗೆ ಸಿದ್ಧತೆ ಮಾಡಿವೆ.
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳ ಓಪನ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವಕಾಶ ನೀಡಿದ್ದರು. 10 ಮೆಟ್ರೋ ನಿಲ್ದಾಣಗಳಲ್ಲಿ ಓಪನ್ ಮಾಡ್ತೇವೆ ಎಂದಿದ್ದರು. ಈಗ ಪ್ರಾರಂಭಿಕವಾಗಿ 3 ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆಗಳ ನಿರ್ಮಾಣ ಸಿದ್ಧವಾಗಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ನಿರ್ಮಾಣ ಆಗಿದೆ.