ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಯಾವಾಗ? ತೇಜಸ್ವಿ ಸೂರ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಇನ್ನಷ್ಟು ವಿಳಂಬವಾಗುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಸಂಸದ, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು BMRCL ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.

ಮೊದಲ ರೈಲು ಈಗ ಜನವರಿ 6 ರಂದು ಬೆಂಗಳೂರಿಗೆ ಹೊರಡಲು ಸಿದ್ಧವಾಗಿದೆ. ಜನವರಿ ಅಂತ್ಯ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸುವುದಾಗಿ ಹೇಳಿದೆ. ಇದಾದ ಬಳಿಕ ತಿಂಗಳಿಗೆ ಒಂದೊಂದು ರೈಲು ವಿತರಣೆಯಾಗಲಿದೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ ವೇಳೆಗೆ ಈ ಸಂಖ್ಯೆಯನ್ನು ತಿಂಗಳಿಗೆ ಎರಡು ರೈಲುಗಳಿಗೆ ಹೆಚ್ಚಿಸಲಾಗುವುದು. ಎಲ್ಲಾ CMRS ಅನುಮತಿಗಳನ್ನು ಪಡೆಯಲು ಸರಿಯಾಗಿ ಕೆಲಸ ಮಾಡಲು BMRCL ಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!