ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್ ವೇ ಲೋಕಾರ್ಪಣೆ ಯಾವಾಗ? ಸಚಿವ ನಿತಿನ್ ಗಡ್ಕರಿ ನೀಡಿದ್ರು ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್ ವೇ ಲೋಕಾರ್ಪಣೆ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಹತ್ವದ ಮಾಹಿತಿ ನೀಡಿದ್ದಾರೆ.

15,188 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 262 ಕಿ.ಮೀ ಉದ್ದದ ಎಕ್ಸ್​​ಪ್ರೆಸ್​ ವೇಯಲ್ಲಿ ಕರ್ನಾಟಕ ವ್ಯಾಪ್ತಿಯಲ್ಲಿ ಈಗಾಗಲೇ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಂಪೂರ್ಣ ಕಾಮಗಾರಿ 2025 ರ ಡಿಸೆಂಬರ್ ಮತ್ತು 2026 ರ ಮಾರ್ಚ್ ನಡುವೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ನಂತರ ಎಕ್ಸ್​​ಪ್ರೆಸ್​​​ ವೇ ಲೋಕಾರ್ಪಣೆಯಾಗಲಿದೆ ಎಂದು ತಿಳಿಸಿದರು.

ಬೆಂಗಳೂರು-ಹೈದರಾಬಾದ್ (512 ಕಿ.ಮೀ) ಮತ್ತು ಬೆಂಗಳೂರು-ಪುಣೆ (700 ಕಿ.ಮೀ) ಎಕ್ಸ್‌ಪ್ರೆಸ್‌ವೇಗಳಿಗೆ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ಸಲ್ಲಿಸಲಾಗಿದೆ. ಹೊಸ ಎಕ್ಸ್‌ಪ್ರೆಸ್‌ವೇ ಜಾಲವು ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗಳು, ರಸ್ತೆಬದಿಯ ಸೌಲಭ್ಯಗಳು ಮತ್ತು ಯುಟಿಲಿಟಿ ಕಾರಿಡಾರ್‌ಗಳನ್ನು ಹೊಂದಿರುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಎಕ್ಸ್​​ಪ್ರೆಸ್ ವೇ ಯೋಜನೆಗಳ ವಿಳಂಬಕ್ಕೆ ಕಾರಣವೇನು?
ಎಕ್ಸ್​​ಪ್ರೆಸ್ ವೇ ಯೋಜನೆಗಳ ವಿಳಂಬಕ್ಕೆ ಕಾರಣಗಳನ್ನು ತಿಳಿಸಿದ ಅವರು, ಭೂಸ್ವಾಧೀನಕ್ಕೆ ವಿರೋಧ, ಪರಿಹಾರ ವಿತರಣೆಯಲ್ಲಿ ನಿಧಾನಗತಿ ಮತ್ತು ಧಾರ್ಮಿಕ ಕಟ್ಟಡಗಳನ್ನು ಸ್ಥಳಾಂತರಿಸುವಲ್ಲಿನ ತೊಂದರೆಗಳು ಕಾಮಗಾರಿ ವಿಳಂಬಕ್ಕೆ ಕಾರಣವಾಗಿವೆ ಎಂದು ಹೆದ್ದಾರಿ ಸಚಿವಾಲಯ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!