ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯ ನಡುವೆಯೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ದೇಶದ ಜನತೆಗೆ ಮಂಡಿಸಿದ್ದು, ಹಲವಾರು ಯೋಜನೆಗಳನ್ನು ಘೋಷಿಸಿದೆ. ಇದೇ ವೇಳೆ ಬಿಜೆಪಿಯ ಪ್ರಣಾಳಿಕೆ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಮೂಡಿದ್ದು, ಇದಕ್ಕೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಏಳೆಂಟು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಜನಾಥ್ ಸಿಂಗ್ ಹೇಳಿದ್ದಾರೆ. ಅದರಂತೆ ಈಗಾಗಲೇ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ. ಪ್ರಣಾಳಿಕೆ ಜಾರಿಯಾಗಬೇಕು, ಭರವಸೆ ಈಡೇರಿಸಬೇಕು ಎಂಬ ದೃಷ್ಟಿಯಿಂದಲೂ ತಯಾರಿ ನಡೆಸುತ್ತಿದ್ದೇವೆ ಎಂದರು.
ಪ್ರಣಾಳಿಕೆಯ ಎಲ್ಲ ಅಂಶಗಳೇನು ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಸಣ್ಣ ಸುಳಿವು ಬಿಟ್ಟುಕೊಟ್ಟರು. ದೇಶ ಅಥವಾ ಚುನಾವಣೆಯ ಬಗ್ಗೆ ಕೇಳಿದಾಗ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ. ಇದೇ ವೇಳೆ ಪ್ರಣಾಳಿಕೆಯಲ್ಲಿ ದೇಶ ಮತ್ತು ಚುನಾವಣೆಯ ಪ್ರಸ್ತಾಪವಿದೆ ಎಂದು ತಿಳಿಸಿದರು.