September 30, 2026
Wednesday, September 30, 2026
spot_img

ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯ ಮೊದಲ ಹಂತ ಪೂರ್ಣವಾಗೋದು ಯಾವಾಗ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆಯ ಮೊದಲ ಹಂತವನ್ನು ಮುಂದಿನ ಒಂದೂವರೆ ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಉತ್ತರ ಮತ್ತು ದಕ್ಷಿಣ ಕಾರಿಡಾರ್‌ಗಳಿಗೆ ಭೂಸ್ವಾಧೀನಗೊಂಡ ಭೂಮಿಯ ಮಾಲೀಕರಿಗೆ ಪರಿಹಾರ ಮೊತ್ತದ ಚೆಕ್‌, ಪ್ರಮಾಣಪತ್ರಗಳು ಹಾಗೂ ಟಿಡಿಎಸ್ ವಿತರಿಸಲಾಗಿದೆ ಎಂದು ಹೇಳಿದರು.

ಯೋಜನೆಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರ ವ್ಯವಸ್ಥೆಗಳನ್ನು ಕಲ್ಪಿಸಿದೆ. ಕೆಲವು ಭೂಮಾಲೀಕರು ಶೇ.35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪರಿಹಾರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ನಗದು ಪರಿಹಾರವನ್ನು ಸ್ವೀಕರಿಸಿದ್ದಾರೆ.

ಭೂ ಮಾಲೀಕರಿಗೆ ಮಾರುಕಟ್ಟೆ ಮೌಲ್ಯದ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯೊಳಗಿನ ಆಸ್ತಿಗೆ ಮಾರುಕಟ್ಟೆ ಮೌಲ್ಯದ ಎರಡು ಪಟ್ಟು ಪರಿಹಾರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

Must Read