ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಮೂರನೇ ಪಟ್ಟಿ ರಿಲೀಸ್ ಆಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ತಳಮಳ ಹೆಚ್ಚಾಗಲಿದೆ ಎಂದಿದ್ದಾರೆ. ಸಾಕಷ್ಟು ಮಂದಿಗೆ ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವುದು ನಿಜ. ಆದರೆ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇವೆ. ಪಕ್ಷ ಅವರು ನೀಡಿರುವ ಕೊಡುಗೆ, ಸೇವೆಯನ್ನು ನಾವು ಮರೆತಿಲ್ಲ ಎಂದಿದ್ದಾರೆ.
ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 189 ಮಂದಿಗೆ ಟಿಕೆಟ್ ಘೋಷಣೆ ಮಾಡಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ, ಮೂರನೇ ಪಟ್ಟಿಯಲ್ಲಿ 12 ಮಂದಿಗೆ ಟಿಕೆಟ್ ಘೋಷಣೆಯಾಗಲಿದೆ.