September 30, 2026
Wednesday, September 30, 2026
spot_img

ವಾರಾಹಿ ನೀರಾವರಿ ಯೋಜನೆ ಸಮಸ್ಯೆಗೆ ಫುಲ್‌ಸ್ಟಾಪ್‌ ಯಾವಾಗ? ಸಚಿವೆ ಹೆಬ್ಬಾಳ್ಕರ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ‌ ಎಂದರು. ವಾರಾಹಿ ನೀರಾವರಿ ಯೋಜನೆ ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ.‌ ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ ಎಂದು ಹೇಳಿದರು. ‌

Must Read