ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗ ಚಾಲ್ತಿಯಲ್ಲಿರುವ ಮೆಟ್ರೋ ಯೋಜನೆಯ ವಿವಿಧ ಕಾಮಗಾರಿಗಳು 2029ರ ಡಿಸೆಂಬರ್ ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲ ಥವರಚಂದ್ ಗೆಹಲೋತ್ ಹೇಳಿದ್ದಾರೆ.
ಮೆಟ್ರೊ ಯೋಜನೆಯ ಹಂತ-2 ರಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೃಷ್ಣರಾಜಪುರದವರೆಗೆ 19.75 ಕಿ.ಮೀ ಮತ್ತು ಹಂತ-2 ಬಿ ನಲ್ಲಿ ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 38.44 ಕಿ.ಮೀ ಕಾಮಗಾರಿ ನಡೆಯುತ್ತಿದೆ. ಒಟ್ಟು ₹14,788 ಕೋಟಿ ವೆಚ್ಚದ ಕಾಮಗಾರಿಗಳು ಚಾಲ್ತಿಯಲ್ಲಿವೆ.
ಹಂತ-3 ಕಾರಿಡಾರ್ 1 ಕೆಂಪಾಪುರದಿಂದ ಜೆ.ಪಿ.ನಗರ 4 ನೇ ಹಂತದವರೆಗೆ 32.15 ಕಿ.ಮೀ ಮತ್ತು ಕಾರಿಡಾರ್ 2 ಹೊಸಹಳ್ಳಿಯಿಂದ ಕಡಬಗೆರೆವರೆಗಿನ 12.50 ಕಿ.ಮೀ. ಒಟ್ಟು 44.65 ಕಿ.ಮೀ ಉದ್ದದ ₹15,611 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ.
ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೊ ಮತ್ತು ರಸ್ತೆ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.