ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ ಹಿರಿಯ ನಾಗರೀಕರವರೆಗೆ, ಯುವಕರಿಂದ ಮಹಿಳೆಯರವರೆಗೆ ಎಲ್ಲರಿಗೂ ಕಾರ್ಯಕ್ರಮ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿ ಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಇಂದು ಭೂ ಗ್ಯಾರಂಟಿ ಯೋಜನೆ ಮೂಲಕ ಹಟ್ಟಿ, ತಾಂಡಾಗಳ ಸಾವಿರಾರು ಜನರಿಗೆ ಭೂಮಿ ಹಕ್ಕು ಪತ್ರ ನೀಡಿದ್ದೇವೆ. ಈ ಹಿಂದೆ ಬೇರೆ ಯಾವುದೇ ಸರ್ಕಾರ ಇಂತಹ ಕಾರ್ಯಕ್ರಮ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ, ಬಡವರ ಹೊಟ್ಟೆ ತುಂಬಿಸಲು ಕಾರ್ಯಕ್ರಮ ರೂಪಿಸುತ್ತಾ ಬಂದಿದೆ. ಬಿಜೆಪಿಯವರು ಅಧಿಕಾರ ನಡೆಸಿದ್ದಾರೆ. ಆದರೆ ಅವರು ಭಾವನೆ ಮೇಲೆ ರಾಜಕಾರಣ ಮಾಡಿದ್ದಾರೆ. ನಾವು ಜನರ ಬದುಕು ಕಟ್ಟಲು ರಾಜಕೀಯ ಮಾಡಿದ್ದೇವೆ. ನಮ್ಮ ಸರ್ಕಾರ ಕೊಟ್ಟಿರುವ ಕೊಡುಗೆಗಳಿಗೆ ನಿಮ್ಮ ಕಣ್ಣುಗಳೇ ಸಾಕ್ಷಿ ಎಂದು ಹೇಳಿದರು.