ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಳಗ್ಗೆಯೆಲ್ಲಾ ಬಿಸಿಲು, ಸಂಜೆ ಮೇಲೆ ಮಳೆ.. ನಾಳೆ ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ ಕೆಲವು ದಿನದಿಂದ ಗುಡುಗು ಸಮೇತ ಮಳೆಯಾಗುತ್ತಿದ್ದು, ವಾತಾವರಣ ಲೆಕ್ಕಾಚಾರ ಕಷ್ಟವಾಗಿದೆ.
ಬೆಳಗ್ಗೆ ಬಿಸಿಲಿನ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಮೋಡ ಆಗುತ್ತದೆ. ಕರ್ನಾಟಕದ ಯಾವ ಭಾಗದಲ್ಲಿ ನಾಳೆ ಮಳೆಯಾಗಲಿದೆ? ಮಾಹಿತಿ ಇಲ್ಲಿದೆ..
ಕೊಡಗು, ಸೋಮವಾರಪೇಟೆ, ಸಕಲೇಶಪುರ,ಮೂಡಿಗೆರೆ , ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ,ಹೊಸನಗರ,ಸಾಗರ,ಶಿರಸಿ,ಸಿದ್ದಾಪುರ, ಯಲ್ಲಾಪುರ ಸುತ್ತಮುತ್ತ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಕಾಸರಗೋಡಿನ ಮುಳ್ಳೇರಿಯ, ಪೆರ್ಲ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯಾಗಬಹುದು.
ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಸಂಭವ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss