ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ.ಜೊತೆಗೆ ದೂರದಾರನಿಗೆ 5 ಕೋಟಿ ಹಣ ಎಲ್ಲಿಂದ ಬಂದಿದೆ ಎಂಬ ಬಗ್ಗೆ ತನಿಖೆ ನಡೆಸುವಂತೆ ವಕೀಲರೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣದ ದೂರುದಾರ ಗೋವಿಂದ ಬಾಬು ಪೂಜಾರಿ ತಮ್ಮ ದೂರಿನಲ್ಲೇ 5 ಕೋಟಿ ನಗದು ಹಣವನ್ನು ಚೈತ್ರಾ ಅವರಿಗೆ ನೀಡಿರುವುದಾಗಿ ಉಲ್ಲೇಖ ಮಾಡಿದ್ದಾರೆ. ಇದೀಗ ಇಷ್ಟೊಂದು ದೊಡ್ಡ ಮೊತ್ತದ ಹಣವು ಹವಾಲ ಮಾರ್ಗದಿಂದ ಬಂದಿರುವ ಅನುಮಾನ ವ್ಯಕ್ತಪಡಿಸಿರುವ ವಕೀಲ ನಟರಾಜ್ ಶರ್ಮಾ ಅವರು ಇಡಿಗೆ ದೂರು ನೀಡಿದ್ದಾರೆ.
ಈ ಪ್ರಕರಣವನ್ನು ಇಡಿ ತನಿಖೆ ಮಾಡಿ ಹಣದ ಬಗ್ಗೆ ವಿಚಾರಣೆ ನಡೆಸಬೇಕು. ಬ್ಯಾಂಕ್ನಿಂದ ಸಾಲ ಪಡೆದಿರುವುದಾಗಿ ಗೋವಿಂದ್ ಪೂಜಾರಿ ಹೇಳಿದ್ದಾರೆ.. ಹಣವನ್ನು ಸಾಲ ಪಡೆದು ಈ ರೀತಿ ಬಳಸಿಕೊಳ್ಳೋದು ಸಹ ತಪ್ಪು. ಅವರು ಮುಂಬೈನಲ್ಲಿ ಉದ್ಯಮ ಮಾಡುತ್ತಿರುವುದರಿಂದ ಇದು ಹವಾಲ ವಹಿವಾಟು ಎಂದು ಅನುಮಾನ ವ್ಯಕ್ತಪಡಿಸಿರುವ ವಕೀಲರು, ಇಂದು ಇಡಿಗೆ ದೂರು ನೀಡಿದ್ದಾರೆ.