ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ಹರಿಯುತ್ತಿರುವ ಅವಹೇಳನಕಾರಿ ಕಾಮೆಂಟ್‌ಗಳು ಮತ್ತು ನಿಂದನೆಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ವಿರುದ್ಧ ಹಾನಿಕರ ಪೋಸ್ಟ್‌ಗಳು ನಿರಂತರವಾಗಿ ಪ್ರಕಟವಾಗುತ್ತಿವೆ ಎಂದು ಆರೋಪಿಸಿದ ಅವರು ಕಾನೂನು ಪ್ರಕ್ರಿಯೆಗೆ ಕೈ ಹಾಕಿದ್ದಾರೆ.
ಇತ್ತೀಚೆಗೆ ದಾವಣಗೆರೆಯಲ್ಲಿ ಅವರು ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದ್ದು, ಅದರಿಂದಾಗಿ ನಿಂದನಾ ಪೋಸ್ಟ್‌ಗಳು ಹೆಚ್ಚಾಗಿವೆ. “ದರ್ಶನ್ ಇದ್ದಾಗ ಯಾರೂ ಮಾತನಾಡಿರಲಿಲ್ಲ, ಈಗ ಎಲ್ಲರೂ ಟಿವಿ ಚಾನೆಲ್‌ಗಳಲ್ಲಿ ಮತ್ತು ವೇದಿಕೆಗಳಲ್ಲಿ ಮಾತಾಡುತ್ತಿದ್ದಾರೆ” ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಸುಮಾರು 15 ಇನ್‌ಸ್ಟಾಗ್ರಾಂ ಖಾತೆಗಳು ಮತ್ತು 150ಕ್ಕೂ ಹೆಚ್ಚು ನಿಂದನಾ ಕಾಮೆಂಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಸಂಗ್ರಹಿಸಿ ಪೊಲೀಸ್ ಠಾಣೆಗೆ ಸಲ್ಲಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

