ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುತ್ರ ಬಿ ವೈ ವಿಜಯೇಂದ್ರ ( B Y Vijayendra ) ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ವರುಣಾ ಕ್ಷೇತ್ರದಿಂದ ಸ್ಪರ್ಧಿಸೋ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ( Farmer CM BS Yediyurappa ) ಸ್ಪಷ್ಟ ಪಡಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಬಿ.ವೈ ವಿಜಯೇಂದ್ರ ಅವರು ಎಲ್ಲಿಂದ ಸ್ಪರ್ಧೆ ನಡೆಸಲಿದ್ದಾರೆ ಎನ್ನುವುದೇ ಕುತೂಹಲ ಮೂಡಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.
ಬಿ.ವೈ ವಿಜಯೇಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಅವರು ಶಿಕಾರಿಪುರ ಕ್ಷೇತ್ರದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.