ಹೊಸದಿಗಂತ ಡಿಜಿಟಲ್ ಡೆಸ್ಕ್
ತಾಜ್‌ಮಹಲ್‌ನ 22 ಮುಚ್ಚಿದ ಕೊಠಡಿಗಳ ಬಾಗಿಲು ತೆಗೆಸಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂಬ ಅಲಹಾಬಾದ್ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ ಸುಪ್ರಿಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅರ್ಜಿದಾರ ಡಾ.ರಜನೀಶ್ ಸಿಂಗ್ ನಿರ್ಧರಿಸಿದ್ದಾರೆ.
ಹಿಂದೂ ದೇವತೆಗಳ ವಿಗ್ರಹಗಳನ್ನು ಮುಚ್ಚಿದ ಬಾಗಿಲುಗಳ ಹಿಂದೆ ಇರಿಸಿ ಬೀಗ ಹಾಕಲಾಗಿದೆ. ತಾಜ್ ಮಹಲ್ ಶಿವ ದೇವಾಲಯವಾಗಿತ್ತು. ಇದೀಗ ಮುಚ್ಚಿರುವ 22 ಕೊಠಡಿಗಳ ಬಾಗಿಲುಗಳನ್ನು ತೆರೆದು ತನಿಖೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಡಾ ರಜನೀಶ್ ಸಿಂಗ್ ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಅಲಹಾಬಾದ್‍ನ ವಿಭಾಗೀಯ ಪೀಠದ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಈ ಬಗೆಯ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ತೀರ್ಪಿತ್ತಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ನಿರ್ಧರಿಸಲಾಗಿದೆ. ವಕೀಲರಾದ ರಾಮ್ ಪ್ರಕಾಶ್ ಶುಕ್ಲಾ, ಮತ್ತು ರುದ್ರವಿಕ್ರಮ ಸಿಂಗ್ ಅರ್ಜಿದಾರರ ಪರವಾಗಿ ಅರ್ಜಿ ಸಲ್ಲಿಸಲಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ