ಗುರು, ಶುಕ್ರ, ಶನಿವಾರ ಕೇರಳದ ಎಲ್ಲೆಲ್ಲಿ ಬೀಳಲಿದೆ ಭರ್ಜರಿ ಮಳೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರಬ್ಬಿ ಸಮುದ್ರ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಕೇರಳದಲ್ಲಿ ಮತ್ತೊಮ್ಮೆ ಮಳೆಯ ಆರ್ಭಟ ಕಾಣಿಸಿಕೊಳ್ಳಲಿದೆ. ಈಗಾಗಲೇ ಹದಿನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ವ್ಯಾಪಕ ಎಚ್ಚರಿಕೆ ವಹಿಸುವಂತೆ ಆಡಳಿತಗಳು ನಾಗರಿಕರಿಗೆ ಸೂಚಿಸಿವೆ.

ಎಲ್ಲೆಲ್ಲಿ ಯಾವಾಗ ಮಳೆ?

ಗುರುವಾರ-ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು,

ಶುಕ್ರವಾರ-ತಿರುವನಂತಪುರ, ಕೊಲ್ಲಂ, ಆಲಪ್ಪುಳ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು,

ಶನಿವಾರ- ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!