ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಎಲ್ಲಿ?: ಕಾಂಗ್ರೆಸ್ ನಾಯಕರು ಏನು ಹೇಳ್ತಾರೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ಹೊಸ ಹುರುಪು ನೀಡಿದೆ. ಈ ಗೆಲುವಿನ ಜೋಷ್ ನೊಂದಿಗೆ ಮುಂಬರವು ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗೆ ಹೊಸ ರಣತಂತ್ರ ರೂಪಿಸಿ ಸಜ್ಜಾಗುತ್ತಿದೆ.

ಈಗಾಗಲೇ ಮತ್ತೆ ಅದಿಕಾರಕ್ಕೇರಲು ಕಾಂಗ್ರೆಸ್ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ತಯಾರಿಯಲ್ಲಿದ್ದು, ಇದರ ನಡುವೆ ರಾಹುಲ್ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋ ಚರ್ಚೆಗಳು ಈಗ ಶುರುವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಹೀಗಾಗಿ ಈ ಬಾರಿಯೂ ಅಲ್ಲೆಯೇ ಸ್ಫರ್ದಿಸುತ್ತಾರಾ ಇಲ್ಲವೇ ವಯಾನಾಡಿಗೆ ಗುಡ್‌ಬೈ ಹೇಳಿ, ಅಮೇಥಿಯಿಂದ ಸ್ಪರ್ಧಿಸಲಿದ್ದಾರಾ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಶುರುವಾಗಿದೆ.

ಈ ಕುರಿತು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ಅಜಯ್ ರೈ, ನೆಹರೂ ಹಾಗೂ ಗಾಂಧಿ ಕುಟುಬಕ್ಕೆ ಅಮೇಥಿ ಕ್ಷೇತ್ರದ ಕುರಿತು ಅವಿನಾಭವ ಸಂಬಂಧವಿದೆ. ಹೀಗಾಗಿ ಈ ಬಾರಿ ರಾಹುಲ್ ಗಾಂಧಿಯನ್ನು ಅಮೇಥಿ ಜನರು ಗೆಲ್ಲಿಸಿ ದೆಹಲಿ ಸಂಸತ್ತಿಗೆ ಕಳುಹಿಸಬೇಕು ಎಂದು ಅಮೇಥಿ ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ.

ಈ ಮೂಲಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಉತ್ತರ ಪ್ರದೇಶದಲ್ಲಿರುವ ಹಲವು ಸ್ಥಾನಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ರೈ ಹೇಳಿದ್ದಾರೆ.

ಇದೀಗ ರೈ ಮಾತು ಭಾರಿ ಸಂಚಲನ ಸೃಷ್ಟಿಸಿದೆ. ಇತ್ತ ಕಾಂಗ್ರೆಸ್ ಪಕ್ಷ ಈ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ.
ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಕಳೆದ ಬಾರಿ ಕಹಿ ಅನುಭವ ನೀಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿ ಹಾಗೂ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಭರ್ಜರಿ ಗೆಲುವು ದಾಖಲಿಸಿದ್ದರು.

ಅಮೇಥಿಯಲ್ಲಿ ಗೆಲುವಿನ ಅವಕಾಶ ಕಡಿಮೆ ಇನ್ನೋ ಕಾಂಗ್ರೆಸ್ ಆಂತರಿಕೆ ಸಮೀಕ್ಷಾ ವರದಿ ಆಧರಿಸಿ, ರಾಹುಲ್ ಗಾಂಧಿ ಸುಲಭ ಗೆಲುವಿನ ಕ್ಷೇತ್ರವಾಗಿರುವ ವಯನಾಡಿನಿಂದ ಸ್ಪರ್ಧಿಸಿದ್ದರು. ಮುಸ್ಲಿಮ್ ಮತ ಸಂಖ್ಯೆ ಹೆಚ್ಚಿರುವ ವಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ 7,06,367 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಿಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!