ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ ಪ್ರಕರಣದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಇದೊಂದು ಕೊಲೆ ಪ್ರಕರಣವಾಗಿರುವುದರಿಂದ ಗಂಭೀರ ವಿಚಾರ ಎಂದಿದ್ದಾರೆ. ಇದರಲ್ಲಿ ನಟ ದರ್ಶನ್ ಪಾತ್ರ ಏನು ಎಂಬುದು ತನಿಖೆಯ ನಂತರವಷ್ಟೇ ತಿಳಿಯಲಿದೆ. ಅವರ ಪ್ರಕಾರ, ವೈಯಕ್ತಿಕ ಕಾರಣಕ್ಕಾಗಿ ಕೊಲೆ ಮಾಡಲಾಗಿದೆಯೇ ಅಥವಾ ಬೇರೆ ಯಾವುದಾದರೂ ಉದ್ದೇಶವಿದೆಯೇ ಎಂಬುದು ತನಿಖೆಯಿಂದ ತಿಳಿದುಬರುತ್ತದೆ.
ಆರೋಪಿಗಳ ವಿಚಾರಣೆ ವೇಳೆ ದರ್ಶನ್ ಹೆಸರು ಕೇಳಿ ಬಂದಿರುವ ಮಾಹಿತಿ ಇದೆ. ತನಿಖೆ ಪೂರ್ಣಗೊಳ್ಳುವವರೆಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಅವರು ನೇರವಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ? ಯಾವ ಕಾರಣಕ್ಕೆ ಕೊಲೆ ಆಗಿದೆ. ಅವರ ಹೆಸರು ಏಕೆ ಹೊರಬಿದ್ದಿದೆ ಎಂಬುದು ತನಿಖೆಯ ನಂತರ ತಿಳಿಯಲಿದೆ. ಈ ಸಂದರ್ಭದಲ್ಲಿ ಬೇರೇನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.