ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿದು ಗಾಡಿ ಓಡಿಸುವಾಗ ರಸ್ತೆ ಪಕ್ಕವೇ ಇದ್ದ ಕಲ್ಲಿಗೆ ಕಾರು ಗುದ್ದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ರಸ್ತೆ ಪಕ್ಕದ ಕಲ್ಲಿಗೆ ಕಾರು ಗುದ್ದಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬಸವನಬಾಗೇವಾಡಿ -ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಲ್ಲು ಡೋಲಗೊಂಡ (32), ಪರಶು ಮಿಣಜಿಗಿ (26) ನರಳಾಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೇವಣಸಿದ್ಧ ಶೇಕಣ್ಣಿ (27) ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬಸವನಬಾಗೇವಾಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿಕೊಂಡು ರಾತ್ರಿ ಕಾರಿನಲ್ಲಿ ಇಂಗಳೇಶ್ವರ ಗ್ರಾಮಕ್ಕೆ ತೆರಳುತ್ತಿದ್ದರು. ಕಾರಿನ ಮುಂಭಾಗದ ಕುಳಿತು ಮಲ್ಲು ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದನು. ಕುಡಿದ ಮತ್ತಿನಲ್ಲಿ ಕಾರಿನಲ್ಲಿ ಹಾಡು ಹಾಕಿಕೊಂಡು ಐವರು ಖುಷಿಯಾಗಿ ತೆರಳುತ್ತಿದ್ದರು. ಆದರೆ ಓವರ್ ಸ್ಪೀಡ್ ನಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದಿದೆ.