ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕಾಳು ಮೆಣಸು ಕೊಯ್ಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.
ಮಹಾಲಿಂಗಂ (25) ಮೃತ ದುರ್ದೈವಿ. ಚಂದ್ರೇಗೌಡ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಆಲ್ಯುಮಿನಿಯಂ ಏಣಿಯಲ್ಲಿ ನಿಂತು ಮಹಾಲಿಂಗ ಕಾಳು ಮೆಣಸು ಕೊಯ್ಯುತ್ತಿದ್ದರು. ಆ ವೇಳೆ ಏಣಿಗೆ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ.
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.