ಪ್ರಧಾನಿ ದೇಶವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುತ್ತಿರುವಾಗ ಕೆಲವರು ವಿದೇಶಿ ನೆಲದಲ್ಲಿ ಭಾರತವನ್ನು ಟೀಕಿಸುತ್ತಾರೆ: ರಾಹುಲ್ ಗಾಂಧಿ ವಿರುದ್ಧ ಸಿಎಂ ಯೋಗಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಂಡನ್ ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಇದೀಗ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾನುವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುತ್ತಿರುವಾಗ ಕೆಲವರು ದೇಶದ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಇಲ್ಲಿ ನಡೆದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ‘ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾಗತಿಕ ವೇದಿಕೆಗಳಲ್ಲಿ ಭಾರತದ ಪ್ರಾಬಲ್ಯ ಹೆಚ್ಚುತ್ತಿದ್ದರೆ, ಕೆಲವರು ವಿದೇಶಿ ನೆಲದಲ್ಲಿ ಭಾರತವನ್ನು ಟೀಕಿಸುತ್ತಿದ್ದಾರೆ. ಇಂದು ಭಾರತದ ಪ್ರಜಾಪ್ರಭುತ್ವವನ್ನು ಟೀಕಿಸುವ ಜನರೇ ಅವಕಾಶ ಸಿಕ್ಕಾಗಲೆಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಈ ಜನ ವಿದೇಶದಲ್ಲಿದ್ದಾಗ ದೇಶವನ್ನು ಟೀಕಿಸುತ್ತಾರೆ. ಆದರೆ ಅವರು ಮನೆಯಲ್ಲಿದ್ದಾಗ ಉತ್ತರ ಪ್ರದೇಶವನ್ನು ಟೀಕಿಸುತ್ತಾರೆ . ಆದರೆ ಮುಂದಿನ ದಿನಗಳಲ್ಲಿ ಭಾರತ ಜಗತ್ತಿಗೆ ದಾರಿ ತೋರಿಸುವ ದೇಶವಾಗಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!