ನೋಡ ನೋಡುತ್ತಿದ್ದಂತೆ ಸಮುದ್ರದಲ್ಲಿ ಮುಳುಗಿದ ಹಡಗು: 9ಮಂದಿ ಬಚಾವ್‌,‌ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೊಡ್ಡ ದೋಣಿಗಳು ಸಮುದ್ರದಲ್ಲಿ ಮುಳುಗುವ ದೃಶ್ಯಗಳನ್ನು ಸಿನಿಮಾಗಳಲ್ಲಿ ನೋಡಿರುತ್ತೇವೆ. ನಿಜವಾಗಿಯೂ ಕೂಡ ಇಂತಹ ಘಟನೆಗೂ ನಡೆಯುತ್ತವೆ. ಮೊನ್ನೆಯಷ್ಟೇ ಮಂಗಳೂರು ಕರಾವಳಿಯಲ್ಲಿ ವಾಣಿಜ್ಯ ಹಡಗೊಂದು ಸಮುದ್ರ ಪಾಲಾಗಿತ್ತಿ. ಆದರೆ ಈಗ ವೈರಲ್‌ ಆಗಿರುವ ವೀಡಿಯೋದಲ್ಲಿ 130 ಅಡಿಯ ದೋಣಿ ಮೆಡಿಟರೇನಿಯನ್ ಸಮುದ್ರದಲ್ಲಿ ನಿಧಾನವಾಗಿ ಮುಳುಗಿದೆ. ಅದೃಷ್ಟವಶಾತ್‌ ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಮುದ್ರ ತೀರದಿಂದ 14.5 ಕಿ.ಮೀ ದೂರದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ದೋಣಿ ಏಕೆ ಸಮುದ್ರದಲ್ಲಿ ಮುಳುಗಿತು ಎಂಬುದಕ್ಕೆ ತನಿಖೆ ಆರಂಭವಾಗಿದೆ.

ಮೆಡಿಟರೇನಿಯನ್ ಸಮುದ್ರದಲ್ಲಿ ಸೂಪರ್‌ಯಾಚ್ ಹಡಗು ಮುಳುಗುತ್ತಿರುವುದನ್ನು ತೋರಿಸುವ ವೀಡಿಯೋವನ್ನು ಇಟಾಲಿಯನ್ ಕೋಸ್ಟ್ ಗಾರ್ಡ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ಅಂತರಾಷ್ಟ್ರೀಯ ಮಾಧ್ಯಮಗಳ ಪ್ರಕಾರ ದೋಣಿಯಲ್ಲಿದ್ದ ಎಲ್ಲಾ ಒಂಬತ್ತು ಜನರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. ಗಲ್ಲಿಪೋಲಿಯಿಂದ ಮಿಲಾಝೋಗೆ ತೆರಳುತ್ತಿದ್ದಾಗ ದೋಣಿ ಮುಳುಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!