ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷದ 365 ದಿನವೂ ಬಿಳಿ ಟೀ ಶರ್ಟ್ ಧರಿಸಿರುವ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವೈಟ್ ಟೀ ಶರ್ಟ್ ಎಂಬ ಅಭಿಯಾನವನ್ನೇ ಆರಂಭಿಸಿದ್ದಾರೆ.
ಆರ್ಥಿಕ ಸಮಾನತೆ ತಂದು ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಈ ಬಿಳಿ ಟಿ ಶರ್ಟ್ ಅಭಿಯಾನವನ್ನು ಆರಂಭಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ತಮ್ಮ ರಕ್ತ ಮತ್ತು ಬೆವರಿನಿಂದ ದೇಶಕ್ಕೆ ನೀರುಣಿಸುವ ಕಾರ್ಮಿಕರ ಸ್ಥಿತಿ ಹದಗೆಡುತ್ತಿದೆ. ಜನರು ವಿವಿಧ ರೀತಿಯ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.
ಅವರಿಗೆ ನ್ಯಾಯ ಮತ್ತು ಹಕ್ಕುಗಳನ್ನು ಒದಗಿಸಲು ಬಲವಾಗಿ ಧ್ವನಿ ಎತ್ತುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಆಲೋಚನೆಯೊಂದಿಗೆ, ನಾವು #WhiteTshirtMovement ಅನ್ನು ಪ್ರಾರಂಭಿಸುತ್ತಿದ್ದೇವೆ ಎಂದರು.