ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡಿದ ನಂತರ ಮಾತನಾಡಿ, ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ.
ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ, ನಾನು ಎಲ್ಲಿ ಹೇಳುತ್ತೇನೋ ಅಲ್ಲಿ ನಿಲ್ಲಿಸಿ ಪರಿಶೀಲನೆ ಮಾಡಲಾಗುವುದು. ಈಗ ಪರಿಶೀಲನೆ ಮಾಡಿದಾಗ ಅರ್ಧ ಅಡಿ ರಸ್ತೆ ಇದೆ. ಈ ರಸ್ತೆಯಲ್ಲಿ ನೀರು, ಕೇಬಲ್ ಗಳಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಎಲ್ಲಾ ಶಾಸಕರು ಅಗತ್ಯ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.