Saturday, October 18, 2025

ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? : ಅಮಿತ್‌ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಹಾರದ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ ಆರು ಮತ್ತು ಹನ್ನೊಂದರಂದು ಚುನಾವಣೆ ನಡೆಯಲಿದ್ದು, ನವೆಂಬರ್ ಹದಿನಾಲ್ಕಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಶಾಸಕಾಂಗ ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಮುಂಬರುವ ಚುನಾವಣೆಯನ್ನು ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಅವರು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಏನ್‌ಡಿಒ ಗೆದ್ದರೆ ನಿತೀಶ್ ಕುಮಾರ್ ಅವರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? ಮೈತ್ರಿಕೂಟದಲ್ಲಿ ಹಲವು ಪಕ್ಷಗಳಿವೆ. ಚುನಾವಣೆಯ ನಂತರ ನಾವೆಲ್ಲರೂ ಒಟ್ಟಿಗೆ ಕುಳಿತಾಗ, ಪಕ್ಷಗಳ ನಾಯಕರು ತಮ್ಮ ನಾಯಕನನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಂಬರುವ ಚುನಾವಣೆ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ನಡೆಸಲಾಗುತ್ತಿದೆ. ನಿತೀಶ್ ಕುಮಾರ್ ನಮ್ಮ ಮೈತ್ರಿಕೂಟವನ್ನು ಮುನ್ನಡೆಸುತ್ತಿದ್ದಾರೆ ಎಂದು ತಿಳಿಸಿದರು.

error: Content is protected !!