Tuesday, August 16, 2022

Latest Posts

ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ WHO ಅನುಮೋದನೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ವಿರುದ್ಧ ಆತ್ಯಂತ ಪರಿಣಾಮಕಾರಿಯಾಗಿರುವ ಸ್ವದೇಶಿ ನಿರ್ಮಿತ ಕೋವಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಈ ವಾರ ಅನುಮೋದನೆ ಸಿಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ದೇಶೀಯ ಲಸಿಕೆ ಕೋವಾಕ್ಸಿನ್ ಅನ್ನು ಹೈದರಾಬಾದ್ ಮೂಲದ ತಯಾರಕ ಕಂಪನಿ ಭಾರತ್ ಬಯೋಟೆಕ್ ತಯಾರಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಅನುಮೋದನೆಯು ಭಾರತ್ ಬಯೋಟೆಕ್ ಕೋವಾಕ್ಸಿನ್ ರಫ್ತು ಮಾಡಲು ಹಾಗೂ ಈ ಲಸಿಕೆ ಪಡೆದ ಜನರ ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಲಭಗೊಳಿಸಲು ಅನುಮತಿಸುತ್ತದೆ.
ಇಲ್ಲಿಯವರೆಗೆ ಆಸ್ಟ್ರಾಜೆನೆಕಾ- ಆಕ್ಸ್‌ಫರ್ಡ್‌ನ ಕೋವಿಶೀಲ್ಡ್‌, ಮಾಡೆರ್ನಾ, ಜಾನ್ಸನ್ ಅಂಡ್ ಜಾನ್ಸನ್, ಫೈಜರ್, ಸಿನೋಫಾರ್‌ ಹಾಗೂ ಸಿನೋವ್ಯಾಕ್‌ ಲಸಿಕೆಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss