ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅವರು ವಿಮಾನ ಹತ್ತುವ ಮುನ್ನ ಸನಾ ವಿಮಾನ ನಿಲ್ದಾಣದಲ್ಲಿ ನಡೆದ ವೈಮಾನಿಕ ದಾಳಿಯಿಂದ ಪಾರಾಗಿದ್ದಾರೆ.
ಯೆಮೆನ್ ಸನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದ ವೈಮಾನಿಕ ದಾಳಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ದಾಳಿ ಸಂಭವಿಸಿದಾಗ, ಟೆಡ್ರೊಸ್ ತನ್ನ ವಿಶ್ವಸಂಸ್ಥೆ ಮತ್ತು WHO ಸಹೋದ್ಯೋಗಿಗಳೊಂದಿಗೆ ವಿಮಾನವನ್ನು ಹತ್ತಲು ಹೊರಟಿದ್ದಾಗ ಈ ದಾಳಿ ನಡೆದಿದೆ.