ನಾನು ಯಾರಿಗೆ ಫೋಟೊ ಕಳಿಸಿದ್ದೇನೆ? ಅವರ ಹೆಸರೇನು? : ರೂಪಾಗೆ ರೋಹಿಣಿ ಸವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ತಮ್ಮ ವೈಯಕ್ತಿಕ ಫೋಟೊಗಳನ್ನು ಕಳಿಸಿ, ಅವರ ಸಂಸಾರದಲ್ಲಿ ಹುಳಿ ಹಿಂಡಿದ್ದಾರೆ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿದ್ದು, ನಾನು ಫೋಟೊ ಕಳಿಸಿರುವುದೇ ಆದರೆ, ಯಾವೆಲ್ಲಾ ಅಧಿಕಾರಿಗಳಿಗೆ ಕಳಿಸಿದ್ದೇನೆ, ಅವರ ಹೆಸರುಗಳನ್ನು ಬಹಿರಂಗಗೊಳಿಸಿ ಎಂದು ಸವಾಲ್ ಹಾಕಿದ್ದಾರೆ.

ಈಗಾಗಲೇ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿ ರೂಪಾ ಅವರ ವಿರುದ್ಧ ದೂರು ನೀಡಿದ್ದಾರೆ.

ಮಾಧ್ಯಮಗಳ ಮುಂದೆ ಅಧಿಕಾರಿಗಳು ಮಾತನಾಡಬಾರದು ಎನ್ನುವ ಸುತ್ತೋಲೆ ನಿಯಮವಿದೆ, ಆದರೂ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!