ತಮ್ಮ ಮತಗಟ್ಟೆಯಲ್ಲಿ ʼಮೊದಲ ಪುರುಷ ಮತದಾರʼ ಎಂಬ ಹೆಗ್ಗಳಿಕೆಗೆ ಪಾತ್ರರಾದ ಎಸ್​​​. ಜೈಶಂಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದು ಲೋಕಸಭೆಯ ಆರನೇ ಹಂತದ ಮತದಾನ ನಡೆಯುತ್ತಿದೆ. ದೇಶದ ವಿದೇಶಾಂಗ ಸಚಿವ ಡಾ. ಜೈಶಂಕರ್​​​ ಅವರು ತಮ್ಮ ಮತವನ್ನು ಚಲಾಯಿಸಿದ್ದಾರೆ. ಇದರಲ್ಲೂ ಒಂದು ವಿಶೇಷವಿದೆ. ತಮಗೆ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ʼಮೊದಲ ಪುರುಷ ಮತದಾರʼ ಎಂಬ ಪ್ರಶಂಸೆ ಪಡೆದುಕೊಂಡಿದ್ದಾರೆ.

ಇದರ ಜತೆಗೆ ಮೊದಲ ಪುರುಷ ಮತದಾರ ಪ್ರಮಾಣಪತ್ರವನ್ನು ಸಹ ಪಡೆದಿದ್ದಾರೆ. ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರರಾಗಿದ್ದೇನೆ ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ಕ್ಲಿಕಿಸಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ದೆಹಲಿಯ ಮತದಾರರು ಮತ್ತೊಮ್ಮೆ ಮೋದಿ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ. ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!