ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗೆ ಸೂಕ್ತವಾದ ಉತ್ತರ ನೀಡುತ್ತಿಲ್ಲ. ಇದರ ಜೊತೆಗೆ ಇದೀಗ ಎಸ್‌ಐಟಿಯನ್ನೇ ಪ್ರಶ್ನೆ ಮಾಡಿದ್ದಾರೆ.
ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ ವಿರುದ್ಧ ದೂರು ಕೊಟ್ಟವರು ಯಾರು ಹೇಳಿ ಎಂದು ಪ್ರಜ್ವಲ್ ಪ್ರಶ್ನಿಸಿದ್ದಾರೆ.
ಎಸ್‌ಐಟಿ ಯಾವ ಪ್ರಶ್ನೆ ಕೇಳಿದರೂ ಪ್ರಜ್ವಲ್ ಲಾಯರ್ ಇಲ್ಲದೆ ಮಾತನಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.