ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ವಿಶೇಷ ಸವಲತ್ತುಗಳನ್ನು ಪಡೆದ ಬಳಿಕ ನಟ ದರ್ಶನ್ನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಆದರೆ ಬಳ್ಳಾರಿ ಜೈಲಿಗೆ ಎಂಟ್ರಿ ನೀಡುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ನಟನಿಗೆ ಕೂಲಿಂಗ್ ಗ್ಲಾಸ್ ಧರಿಸಲು ಭದ್ರತಾ ಸಿಬ್ಬಂದಿ ಅನುಮತಿ ನೀಡಿದ್ದಾರೆ. ಕರ್ತವ್ಯ ಲೋಪ ಎಸಗಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಇಲಾಖೆಯ ಡಿಜಿಪಿಗೆ ಡಿಐಜಿ ಟಿ.ಪಿ. ಶೇಷ ಅವರು ಪತ್ರ ಬರೆದಿದ್ದಾರೆ.
ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರದ ಇಂಚಿಂಚೂ ಪ್ರಕ್ರಿಯೆನ್ನು ಜನರು ಗಮನಿಸುತ್ತಿದ್ದಾರೆ. ಬೆಂಗಳೂರಿನಿಂದ ಹೊರಟು ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಬ್ರ್ಯಾಂಡೆಡ್ ಟೀ ಶರ್ಟ್, ಕೂಲಿಂಗ್ ಗ್ಲಾಸ್ ಹಾಕಿಕೊಂಡು ಯಾವ ಅಪರಾಧಿ ಬರುತ್ತಾರೆ ಎಂದು ಜನ ಪ್ರಶ್ನಿಸಿದ್ದಾರೆ.
ಜೈಲಿನ ನಿಯಮಾನುಸಾರ ಮುಖ್ಯ ದ್ವಾರದಲ್ಲಿ ಸ್ವಂತ ವಸ್ತುಗಳನ್ನು ಒಪ್ಪಿಸಬೇಕು. ಆದರೆ ದರ್ಶನ್‌ಗೆ ಕೂಲಿಂಗ್ ಗ್ಲಾಸ್ ಧರಿಸಲು ಅನುಮತಿ ನೀಡಿದ್ದರಿಂದ ಕರ್ತವ್ಯಲೋಪ ಆಗಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಅವರನ್ನು ಕರೆತಂದ ಭದ್ರತಾ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಪತ್ರ ಬರೆದಿದ್ದಾರೆ.