ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಹೊರಬಿದ್ದ ಬೆನ್ನಲ್ಲೇ ಟಿಕೆಟ್ ಹಂಚಿಕೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಎರಡು ದಿನದ ಸಭೆ ಇಂದು ಮುಕ್ತಾಯವಾಗಿದ್ದು, ಈ ಬಾರಿ ಕೆಲ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ಕೊಡುತ್ತಿದ್ದೇವೆ. ಏ.8ಕ್ಕೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಟಿಕೆಟ್ ಹಂಚಿಕೆ ವಿಷಯದಲ್ಲಿ ಸಾಕಷ್ಟು ಚರ್ಚೆಯಾಗಿದೆ, ಸಮಿತಿ ಸಭೆಗಳ ನಂತರ ಇಂದು, ನಾಳೆ ಸಭೆ ಮಾಡಿ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸುತ್ತೇನೆ. ಏ.8ರಂದು ಕೇಂದ್ರ ಸಮಿತಿ ಪಟ್ಟಿ ಪರಿಶೀಲಿಸಿ ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ.
ಗೆಲುವು ನಮ್ಮದೆ, ಕೆಲವು ಕ್ಷೇತ್ರಗಳಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ಸಾಕಷ್ಟು ಆತ್ಮವಿಶ್ವಾಸ ಹೊಂದಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ಜನರು ಯಾರಿಗೆ ವೋಟ್ ಮಾಡಲಿದ್ದಾರೆ ಎನ್ನುವುದು ಮತಎಣಿಕೆ ನಂತರ ತಿಳಿದುಬರಲಿದೆ ಎಂದಿದ್ದಾರೆ.