ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ ಯಾರಿಗೆ ಮುನ್ನಡೆ? ಯಾರಿಗೆ ಹಿನ್ನೆಡೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ 128 ಮತಗಳಿಂದ ಮುನ್ನಡೆ ಸಾಧಿಸಿದ್ದು, ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸಿದ್ದಾರೆ.

ಸಂಡೂರು: ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಮಧ್ಯೆ ತೀವ್ರ ಪೈಪೋಟಿ ಮುಂದುವರೆದಿದೆ. 4ನೇ ಸುತ್ತಿನ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು 1001 ಅಲ್ಪ ಮತಗಳ ಅಂತರಗಳಿಂದ ಮುನ್ನಡೆ ಕಾಯ್ದುಕೊಂಡಿದ್ದು, ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, 20,128 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು 19,127 ಮತಗಳನ್ನು ಪಡೆದಿದ್ದಾರೆ.

ಶಿಗ್ಗಾಂವಿ: ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು. ಬಿಜೆಪಿಯ ಭರತ್ ಬೊಮ್ಮಾಯಿ 4886 ಮತ ಪಡೆದರೆ, ಕಾಂಗ್ರೆಸ್ ನ ಯಾಸೀರಖಾನ ಪಠಾಣ 5585 ಮತ ಪಡೆದಿದ್ದಾರೆ. 440 ಮತಗಳಿಂದ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನಲ್ಲಿ ಒಟ್ಟು 10751 ಮತಗಳ ಎಣಿಕೆ ನಡೆದಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!