ದಿಗಂತ ವರದಿ ವಿಜಯಪುರ:
ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭಗೊಂಡಿದ್ದು, ಅಂಚೆ ಮತ ಎಣಿಕೆಯಲ್ಲಿ ಹಲವು ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ, ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ, ಮುದ್ದೇಬಿಹಾಳ ಬಿಜೆಪಿ ಅಭ್ಯರ್ಥಿ ಎ.ಎಸ್. ಪಾಟೀಲ ನಡಹಳ್ಳಿ, ನಾಗಠಾಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕಧೋಂಡ, ಬಸವನಬಾಗೇವಾಡಿಯ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ, ಇಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ, ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಹಾಗೂ ದೇವರಹಿಪ್ಪರಗಿ ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಮುನ್ನಡೆ ಸಾಧಿಸಿದ್ದಾರೆ.