ಹೊಸದಿಗಂತ ಡಿಜಿಟಲ್ ಡೆಸ್ಕ್:
27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆ ದೊಡ್ಡ ಪ್ರಶ್ನೆಯಾಗಿದ್ದು, ಫಲಿತಾಂಶ ಪ್ರಕಟವಾಗಿ ಸುಮಾರು 15 ದಿನಗಳ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಬುಧವಾರ ಕೇಂದ್ರ ವೀಕ್ಷಕರಾಗಿ ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಓಂ ಪ್ರಕಾಶ್ ಧಂಕರ್ ಅವರನ್ನು ಬಿಜೆಪಿ ನೇಮಕ ಮಾಡಿದೆ.
ದೆಹಲಿಯ ಮುಂದಿನ ಮುಖ್ಯಮಂತ್ರಿಯ ಆಯ್ಕೆಯ ಬಗ್ಗೆ ಸಸ್ಪೆನ್ಸ್ ನಡುವೆಯೇ ಬಿಜೆಪಿ ಶಾಸಕಾಂಗ ಪಕ್ಷವು ತನ್ನ ನಾಯಕನನ್ನು ಆಯ್ಕೆ ಮಾಡಲು ಇಂದು ಸಂಜೆ ಸಭೆ ಸೇರಲಿದೆ.
ಪಕ್ಷದ ಸಂಸದೀಯ ಮಂಡಳಿಯು ರವಿಶಂಕರ್ ಪ್ರಸಾದ್ ಮತ್ತು ಧಂಕರ್ ಅವರನ್ನು ಕೇಂದ್ರ ವೀಕ್ಷಕರಾಗಿ ನೇಮಿಸಿದೆ ಎಂದು ಬಿಜೆಪಿ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.