ಹೊಸದಿಂಗತ ಡಿಜಿಟಲ್ ಡೆಸ್ಕ್:
ಭಾರತದ ಆತಿಥ್ಯದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವ ಕಪ್ನ (World Cup 2023) ಗೆ ಎಲ್ಲಾ ತಂಡಗಳು ಸಜ್ಜಾಗುತ್ತಿದ್ದು, ಸಂಪೂರ್ಣ ವೇಳಾಪಟ್ಟಿಗಾಗಿ ಕಾಯುತ್ತಿದೆ.
ಅಕ್ಟೋಬರ್ 5ರಿಂದ ನವೆಂಬರ್ ತನಕ ಭಾರತದಲ್ಲಿ ಈ ಟೂರ್ನಿ ನಡೆಯಲಿದೆ. ಆದಾಗ್ಯೂ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯಾವಳಿಯ ಸಂಪೂರ್ಣ ಪಂದ್ಯಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಏಕೆಂದರೆ ಬಿಸಿಸಿಐ ಇನ್ನೂ ವೇಳಾಪಟ್ಟಿಯನ್ನು ನೀಡದ ಕಾರಣ ಐಸಿಸಿಗೆ ಪಟ್ಟಿ ಬಿಡುಗಡೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ವಿವಾದ.
ಏಷ್ಯಾ ಕಪ್ ಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ತಂಡ ಹಿಂಜರಿಯುತ್ತಿರುವುದರಿಂದ ಪಾಕಿಸ್ತಾನವು ವಿಶ್ವ ಕಪ್ಗಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದೆ. ಹೀಗಾಗಿ ಎರಡೂ ಟೂರ್ನಿಗಳು ವಿವಾದಕ್ಕೆ ಸಿಲುಕಿದೆ.
ಪಂದ್ಯಾವಳಿಯ ಮೊದಲ ಪಂದ್ಯವು ನ್ಯೂಜಿಲೆಂಡ್ ಮತ್ತು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಉದ್ಘಾಟನಾ ಪಂದ್ಯವನ್ನು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ಆಯೋಜಿಸುವುದು ಬಿಸಿಸಿಐ ಉದ್ದೇಶವಾಗಿದೆ. ಆದರೆ, ಪಾಕಿಸ್ತಾನ ತಂಡ ಅಹಮದಾಬಾದ್ನಲ್ಲಿ ಆಡುವುದಕ್ಕೆ ಹಿಂಜರಿಯುತ್ತಿದೆ. ಹೀಗಾಗಿ ಆ ಪಂದ್ಯವನ್ನು ಚೆನ್ನೈಗೆ ಶಿಫ್ಟ್ ಮಾಡಲು ಮುಂದಾಗಿದೆ. ಜತೆಗೆ ಪಾಕಿಸ್ತಾನ ತಂಡದ ಪಂದ್ಯಗಳನ್ನು ಹೈದರಾಬಾದ್ ಮತ್ತು ಚೆನ್ನೈನಲ್ಲಿ ನಡೆಸಲು ಯೋಜನೆ ರೂಪಿಸಿದೆ. ಆದರೆ ಎಷ್ಟೇ ಒತ್ತಡ ಬಂದರೂ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಅಹಮದಾಬಾದ್ನಲ್ಲಿಯೇ ನಡೆಯಲಿದೆ ಎಂದು ಹೇಳಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಒತ್ತಡಕ್ಕೆ ಮಣಿಯುವುದಿಲ್ಲ ಎಂದಿದೆ. ನೀವು ಎಷ್ಟೇ ಕೂಗಾಡಿದ್ರೂ ಆ ಪಂದ್ಯ ಅಹಮದಾಬಾದ್ನಲ್ಲಿಯೇ ನಡೆಯಲಿದೆ ಎನ್ನಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಭಾರತದ ಇತರ ಪ್ರಮುಖ ಪಂದ್ಯಗಳು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿವೆ. ಮತ್ತೊಂದೆಡೆ, ಪಂದ್ಯಾವಳಿಯಲ್ಲಿ ಐದು ಪಂದ್ಯಗಳಿಗೆ ಆತಿಥ್ಯ ವಹಿಸಲಿರುವ ಲಖನೌನ ಅಟಲ್ಬಿಹಾರಿ ವಾಜಪೇಯಿ ಸ್ಟೇಡಿಯಮ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.