Viral Video | ರಸ್ತೆ ಬದಿಯ ಅಂಗಡಿಯಲ್ಲಿ ಚಾಯ್ ತಯಾರಿಸಿದ ತೃಣಮೂಲ ಕಾಂಗ್ರೆಸ್ ಸಂಸದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ರಸ್ತೆ ಬದಿಯ ಅಂಗಡಿಯಲ್ಲಿ ಚಹಾ ತಯಾರಿಸಿರುವ ವಿಡಿಯೋವನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮಹುವಾ ಮೊಯಿತ್ರಾ ತನ್ನ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದು, ಈ ವೇಳೆ ರಸ್ತೆ ಬದಿಯಲ್ಲಿದ್ದ ಟೀ ಸ್ಟಾಲ್‌ನಲ್ಲಿ ಚಹಾ ತಯಾರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಜಾರಿಗೆ ತಂದಿರುವ ಹೊಸ ಯೋಜನೆಯನ್ನು ಸಾರ್ವಜನಿಕರಿಗೆ ಕೊಂಡೊಯ್ಯಲು ಸಂಸದೆ ಮಹುವಾ ಮೊಯಿತ್ರಾ ನಿನ್ನೆ ಕೃಷ್ಣಾನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದರು.

ಈ ಸಂದರ್ಭದಲ್ಲಿ ಹಲವು ಪ್ರದೇಶಗಳಲ್ಲಿ ಜನರನ್ನು ಭೇಟಿ ಮಾಡಿದರು. ಈ ಹಿಂದೆ ಮಮತಾ ಬ್ಯಾನರ್ಜಿ ಕೂಡ ಜನರೊಂದಿಗೆ ಸಂವಾದ ನಡೆಸುವಾಗ ಹಲವು ಆಹಾರ ಪದಾರ್ಥಗಳನ್ನು ತಯಾರಿಸಿರುವ ವಿಡಿಯೋಗಳು ವೈರಲ್‌ ಆಗಿದ್ದವು. ಇದೀಗ ಅದೇ ಪಾರ್ಟಿಯ ಸಂಸದರೂ ಕೂಡ ದೀದಿ ರೀತಿಯಲ್ಲೇ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!