ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ.. ಮಾಡಿದ್ದು ಯಾರು? ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ.

ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ತಿಳಿಸಿದ್ದಾರೆ.

ಈ ವಿಚಾರ ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್‌ ದಾಖಲಿಸಿ ಅಜ್ಮೀರ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!