ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರ್ತಾರೋ, ಇಲ್ವೋ ಗೊತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿಕೆ ಚರ್ಚೆಗೆ ಕಾರಣವಾಗುತ್ತಿದ್ದಂತೆ ಈ ಬಗ್ಗೆ ಯತೀಂದ್ರ ಮಾತನಾಡಿ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ, ಉಪಚುನಾವಣೆ ಫಲಿತಾಂಶದ ನಂತರ ಆತ್ಮವಿಶ್ವಾಸ ಹೆಚ್ಚಿದೆ ಎಂದು ಹೇಳಿದ್ದಾರೆ.
ಜನರ ಬೆಂಬಲ ನಮ್ಮ ಪರವಾಗಿದೆ. ಹೀಗಾಗಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಸಿಎಂ ಬದಲಾವಣೆ ಮಾಡಬೇಕು ಎಂದು ಶಾಸಕರ ಮನಸ್ಸಿನಲ್ಲಿ ಇಲ್ಲ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.