ಆಹಾರದ ಕೊರತೆ ಇದೆ ಅಂತ ಯಾರ್ರೀ ಹೇಳಿದ್ದು? ಅಗತ್ಯಕ್ಕಿಂತ ಹೆಚ್ಚೇ ಇದೆ: ಜೋಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲಿ ಆಹಾರದ ಕೊರತೆ ಇದೆ ಅನ್ನೋ ಮಾತು ಸುಳ್ಳು, ಈ ರೀತಿ ವದಂತಿಗಳನ್ನು ಹಬ್ಬಿಸಬಾರದು. ನಮ್ಮಲ್ಲಿ ಅಗತ್ಯಕ್ಕಿಂತ ಹೆಚ್ಚು ಆಹಾರ ಇದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್​​​​ ಜೋಶಿ ಹೇಳಿದ್ದಾರೆ.

ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕಿಡಿಗೇಡಿಗಳ ಪ್ರಯತ್ನ ಇದಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಂಜಾಬ್‌ನಲ್ಲಿ ಇಂಥ ಸುಳ್ಳು ವದಂತಿ ಹಬ್ಬಿಸಲಾಗಿದೆ. ಆದರೆ, ದೇಶದ ಯಾವುದೇ ಸ್ಥಳದಲ್ಲೂ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿಲ್ಲ. ಅಗತ್ಯಕ್ಕಿಂತ ಹೆಚ್ಚೇ ದಾಸ್ತಾನಿದೆ. ಜನರು ಅಗತ್ಯ ಆಹಾರ ಧಾನ್ಯ ಮತ್ತು ದೈನಂದಿನ ಅಗತ್ಯ ವಸ್ತುಗಳಿಗೆ ಎಲ್ಲೂ ಮುಗಿಬೀಳಬೇಕಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!