ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಸತ್ ಭವನದ ಒಳಗೆ ಭಾರತ ರತ್ನ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಸ್ಮರಣಾರ್ಥವಾಗಿ ವಿಶೇಷ ಕಾರ್ಯಕ್ರಮವೊಂದು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಕಿರಣ್ ರಿಜಿಜು, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಹಲವು ಪ್ರಮುಖ ಸಂಸದರು ಉಪಸ್ಥಿತರಿದ್ದರು.
ಕಾರ್ಯಕ್ರಮದ ವೇದಿಕೆಯಲ್ಲಿ ರಾಹುಲ್ ಗಾಂಧಿ ಮತ್ತು ರೇಖಾ ಗುಪ್ತಾ ಒಂದೇ ಸ್ಥಳದಲ್ಲಿ ಇದ್ದರು. ಈ ವೇಳೆ ರಾಹುಲ್ ಗಾಂಧಿ ರೇಖಾ ಗುಪ್ತಾ ದೀರ್ಘ ಸಂಭಾಷಣೆ ನಡೆಸಿದ್ದಾರೆ. ಇವರಿಬ್ಬರ ಸಂಭಾಷಣೆಯ ವಿಷಯದ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲವಾದರೂ, ಈ ದೃಶ್ಯವನ್ನು ಒಳಗೊಂಡ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.